ದಾವಣಗೆರೆ: ಮದ್ಯ ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಅಣ್ಣನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವಿ. ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿ. ರಾಮೇನಹಳ್ಳಿ ಗ್ರಾಮದ ವಾಸಿ ಮೋಹನ್ (25) ಮೃತಪಟ್ಟವರು. ಮನೋಜ್ ಕೊಲೆ ಮಾಡಿ ಪರಾರಿಯಾದ ಆರೋಪಿ. ಮನೋಜ್ ಹಾಗೂ ಮೋಹನ್ ಕೂಲಿ ಮಾಡಿ ಜೀವನ ನಡೆಸುತ್ತಿದ್ದರು. ಮದ್ಯಪಾನಕ್ಕೆ ಹಣ ಕೊಡುವ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಹಣ ಕೊಡಲಿಲ್ಲ ಎಂದು ಸಿಟ್ಟಿಗೆದ್ದ ಮನೋಜ ಮನೆಯ ಹೊರಗಡೆ ಬಂದು ಕಲ್ಲು ಚಪ್ಪಡಿಯನ್ನು ತಂದು ಮೋಹನ್ ತಲೆಯ ಮೇಲೆ ಎತ್ತಿ ಹಾಕಿದ್ದಾನೆ. ಮೋಹನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



