ದಾವಣಗೆರೆ: ಪ್ರತ್ಯೇಕ ಎರಡು ಪ್ರಕರಣದಲ್ಲಿ ಇಸ್ಫೀಟ್ ಜೂಜಾಟ ಅಡ್ಡೆ ಮೇಲೆ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದು, ಒಟ್ಟು 2.72 ಲಕ್ಷ, 16 ಜನ ವಶಕ್ಕೆ ಪಡೆಯಲಾಗಿದೆ.
ಮೊದಲ ಪ್ರಕರಣ ಮಾ.12ರಂದು ಮಲೇಬೆನ್ನುರು ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಾಪುರದಿಂದ ಹೊಳೆಸಿರಿಗೇರಿ ಕಡೆ ಹೋಗುವ ಚಾನಲ್ ಪಕ್ಕದ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಮೇಲ್ಕಂಡ ಸ್ಥಳಕ್ಕೆ ದಾಳಿ ಮಾಡಲಾಗಿದೆ. ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು ವಶಕ್ಕೆ ಪಡೆದು, ಒಟ್ಟು 1,43,000/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಎರಡನೇ ಪ್ರಕರಣ ಮಾ.12ರಂದು ಚನ್ನಗಿರಿ ತಾ. ಹೆಬ್ಬಳಗೇರೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ದಾಳಿ ಮಾಡಿ, ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದ 05 ಜನರನ್ನು ವಶಕ್ಕೆ ಪಡೆದಿದೆ. ಆರೋಪಿತರಿಂದ ಇಸ್ಫೀಟ್ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 1,29,200/- ರೂಗಳನ್ನು ವಶಪಡಿಸಿಕೊಂಡಿದ್ದು, ಆರೋಪಿತರ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.