ದಾವಣಗೆರೆ: ತಾಲೂಕಿನ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ರೂ. 12 ಕೋಟಿ ಮೌಲ್ಯದ ಚಿನ್ನ ಹಾಗೂ ಡೈಮಂಡ್ ವಶಕ್ಕೆ ಪಡೆಯಲಾಗಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಸರಿಯಾದ ದಾಖಲೆ ಇಲ್ಲದೇ ಸಾಗಿಸುತಿದ್ದ 12.50 ಕೋಟಿ ಮೌಲ್ಯದ ಗೊಲ್ಡ್, ಡೈಮಂಡ್ ವಶ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆಯಲಾಗಿದೆ.ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸುತಿದ್ದಾಗ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ಏಪ್ರಿಲ್ ತಿಂಗಳ 6 ,9 ದಿನಾಂಕದ ಹಳೆಯ ಬಿಲ್ ಗಳು ಲಭ್ಯವಾಗಿದೆ. ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆ ವಶಪಡೆಯಲಾಗಿದೆ. ಈ ಸಂದರ್ಭದಲ್ಲಿ ಅಧಿಕಾರಿ ರೇಣುಕಾ, ಕಮರ್ಷಿಯಲ್ ಟ್ಯಾಕ್ಸ್ ನ ಇಲಾಖೆ ಉಪ ಆಯುಕ್ತ ಮಂಜುನಾಥ್ ಉಪಸ್ಥಿತರಿದ್ದರು.



