ದಾವಣಗೆರೆ: ಚೆಕ್‌ಬೌನ್ಸ್ ಪ್ರಕರಣವೊಂದರಲ್ಲಿ ಅಪರಾಧ ಸಾಬೀತ ಹಿನ್ನೆಲೆ ಶಿಕ್ಷಕಿಯೊಬ್ಬರಿಗೆ 4 ತಿಂಗಳು ಜೈಲು ಶಿಕ್ಷೆ ಹಾಗೂ 4.5 ಲಕ್ಷ ದಂಡ ವಿಧಿಸಲಾಗಿದೆ.
ಜಿಲ್ಲೆಯ ಹರಿಹದ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಗೆ ವಿಧಿಸಿದ್ದ 4 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 4.5 ಲಕ್ಷ ದಂಡ ಪಾವತಿಸುವಂತ ಆದೇಶಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಶಿಕ್ಷಕಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ, ಹೈಕೋರ್ಟ್ ಸಹ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ಎತ್ತಿ ಹಿಡಿದಿದೆ.
ಹರಿಹರ ತಾಲ್ಲೂಕಿನ ಮಲೇಬೆನ್ನೂರು ಸರ್ಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕಿ ವನಜಾಕ್ಷಿದೇವಿ ಅವರು ಭಾನುವಳ್ಳಿ ಗ್ರಾಮದ ಮಲ್ಲಿನಾಥ ಎ.ಎಸ್.ಎಂಬುವವರಿಂದ ಪಡೆದಿದ್ದ ಸಾಲ ಮರುಪಾವತಿಗೆ ನೀಡಿದ್ದ 4 ಲಕ್ಷ ಮೊತ್ತದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಮಲ್ಲಿನಾಥ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.ಹರಿಹರದ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಆರೋಪಿತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್, ಕೆಳ ನ್ಯಾಯಾಲಯದ ತೀರ್ಪು ಸರಿ ಇದೆ ಎಂದಿದೆ. ದಂಡದ ಮೊತ್ತ ಪಾವತಿಸದಿದ್ದರೆ ಹೆಚ್ಚುವರಿ 2 ತಿಂಗಳು ಕಾರಾಗೃಹ ಶಿಕ್ಷೆ ವಿಧಿಸುವಂತೆ ಹೈಕೋರ್ಟ್ ಆದೇಶಿಸಿದೆ ಎಂದು ದೂರುದಾಮ ಪರ ವಕೀಲ ನಾಗರಾಜ್ ಬಿ. ತಿಳಿಸಿದ್ದಾರೆ.



