ದಾವಣಗೆರೆ: ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಷಾ ನಗರದ 12ನೇ ಕ್ರಾಸ್ ನ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮಟ್ಕಾ ಜೂಜಾಟ ಅಡ್ಡೆ ಮೇಲೆ ದಾಳಿ ನಡೆದಿದ್ದು, ಓರ್ವ ಬಂಧನ ಮಾಲಾಗಿದೆ. 7,690 ರೂ. ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಮಾರ್ಗದರ್ಶನದಲ್ಲಿ ಆಜಾದ್ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದು, ಮಟ್ಕಾ ಜೂಜಾಟಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯಿಂದ 7690/- ರೂಗಳನ್ನು ಹಾಗೂ 8 ಓಸಿ ಚೀಟಿಗಳನ್ನು ವಶಕ್ಕೆ ಪಡೆದಿದ್ದು, ಈ ಸಂಬಂಧ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.



