Connect with us

Dvgsuddi Kannada | online news portal | Kannada news online

ದಾವಣಗೆರೆ: ಮದುವೆ ಆಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿ ಆಟೋ ಡ್ರೈವರ್ ಗೆ 10 ವರ್ಷ ಜೈಲು-50 ಸಾವಿರ ದಂಡ

ದಾವಣಗೆರೆ

ದಾವಣಗೆರೆ: ಮದುವೆ ಆಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿ ಆಟೋ ಡ್ರೈವರ್ ಗೆ 10 ವರ್ಷ ಜೈಲು-50 ಸಾವಿರ ದಂಡ

ದಾವಣಗೆರೆ: ಮದುವೆ ಆಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕ ಅಪರಾಧಿಗೆ 10 ವರ್ಷ ಜೈಲು ಹಾಗೂ 50 ಸಾವಿರ ದಂಡ ವಿಧಿಸಿ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚನ್ನಗಿರಿ ತಾಲ್ಲೂಕಿನ ಅಣ್ಣಾಪುರ ಗ್ರಾಮದ ಸಚಿನ್‌ (24) ಅಪರಾಧಿ. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮ್ ನಾರಾಯಣ ಹೆಗ್ಡೆ ಆದೇಶಿಸಿದ್ದಾರೆ. ಆಟೋ ಚಾಲಕನಾಗಿದ್ದ ಸಚಿನ್‌, 2021 ಸೆ.11ರಂದು ಬಾಲಕಿಯನ್ನು ಅಪಹರಿಸಿದ್ದನು. ಚಿಕ್ಕಮಗಳೂರು ಜಿಲ್ಲೆಗೆ ಕರೆದೊಯ್ದು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ಈ ಸಂಬಂಧ ಚನ್ನಗಿರಿ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತೆಯ ಪರವಾಗಿ ಸರ್ಕಾರಿ ವಕೀಲೆ ಸುನಂದ ಮಡಿವಾಳರ್ ವಾದ ಮಂಡಿಸಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top