ದಾವಣಗೆರೆ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಹೊನ್ನಾಳಿ ಪೊಲೀಸರು ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸಿದ್ದು, 35 ಸಾವಿರ ದಂಡ ವಿಧಿಸಲಾಗಿದೆ.
ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಲಿಂಗಾಪುರ ಬಳಿಯ ತುಂಗಭದ್ರಾ ನದಿ ಪಾತ್ರದಲ್ಲಿ ಸಂಗ್ರಹಿಸಿದ ಮರಳನ್ನು ಸಾಗಿಸುತ್ತಿದ್ದಾಗ ದಾಳಿ ನಡೆದಿದೆ. ಲಾರಿಗಳುಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ 35,000 ದಂಡ ವಿಧಿಸಿದೆ.
ಈ ಕಾರ್ಯಾಚರಣೆಯಲ್ಲಿ ಪಿಐ ಸುನಿಲ್ ಕುಮಾರ್, ಎಎಸ್ಐ ಹರೀಶ್, ಪೊಲೀಸ್ ಕಾನ್ಸ್ಟೆಬಲ್ ಪ್ರಸನ್ನ ಕುಮಾರ್, ಮಂಜುನಾಥ್ ಭಾಗವಹಿಸಿದ್ದರು.



