ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು, ಆರೋಪಿಯಿಂದ 80 ಸಾವಿರ ಮೌಲ್ಯದ 730 ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ.
ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕ್ಕಿ ಭಟ್ಟಿ ಪಾರ್ಕ್ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಎಂಬ ಮಾದಕ ವಸ್ತುಯನ್ನು ಸಾರ್ವಜನಿಕರಿಗೆ ಮಾರಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಮಾರ್ಗದರ್ಶನದಲ್ಲಿ ಆಜಾದ್ ನಗರ ಪೊಲೀಸ್ ನಿರೀಕ್ಷಕ ಅಶ್ವಿನ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ಇಮ್ತಿಯಾಜ್ ಮತ್ತು ಅಲ್ತಾಫ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡವು ಮೇಲ್ಕಂಡ ಸ್ಥಳಕ್ಕೆ ದಾಳಿ ಮಾಡಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಿರಾಜ್ ಖಾನ್ (46 ) ಗುಜರಿ ವ್ಯಾಪರ ವಾಸ: ಟಿಪ್ಪುನಗರ ಈತನನ್ನು ದಸ್ತಗಿರಿ ಮಾಡಿ, ಆರೋಪಿಯಿಂದ ಅಂದಾಜು ಬೆಲೆ 80,000/- ರೂ ಮೌಲ್ಯದ 730 ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವನ್ನು ಎಸ್ಪಿ ಉಮಾ ಪ್ರಶಾಂತ್ ಐಪಿಎಸ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.