ದಾವಣಗೆರೆ: ತಾಲ್ಲೂಕಿನ ಕುರ್ಕಿ ಗ್ರಾಮದ ವೆಂಕಟೇಶ್ವರ ಕ್ಯಾಂಪ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 456 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಡೈವೈಎಸ್ ಪಿ ಬಿ.ಎಸ್. ಬಸವರಾಜ್, ನಿರೀಕ್ಷಕ ಮಂಜುನಾಥ್ ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ಮಾಡಿದೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



