ದಾವಣಗೆರೆ: ಅತಿ ವೇಗವಾಗಿ ಬಂದ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಯುವಕ ಭತ್ತದ ಗದ್ದೆಗೆ ಬಿದ್ದಿದ್ದು, ತೀವ್ರಗಾಯಗೊಂಡ ಇನ್ನೊಬ್ಬ ಯುವಕನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆ ಕೈದಾಳೆ ಗ್ರಾಮದ ಬಳಿ ಸಂಭವಿಸಿದೆ.
ಕೈದಾಳೆ ಗ್ರಾಮದ ರತನ್ (22) ಮೃತ ಯುವಕ. ಗ್ರಾಮದಿಂದ ಹದಡಿ ಕಡೆಗೆ ಬೈಕ್‌ನಲ್ಲಿ ಹೊರಟಿದ್ದ, ಈ ವೇಳೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ರತನ್ ಅನ್ಮು ಆಸ್ಪತ್ರೆಗೆ
ಸಾಗಿಸಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.