ದಾವಣಗೆರೆ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನು ಹಳ್ಳದಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ಪತಿ ಪೊಲೀಸ್ ಅತಿಥಿಯಾಗಿದ್ದಾನೆ. ಚನ್ನಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ಗ್ರಾಮದ ಚಿದಾನಂದ ಆಚಾರಿ ಬಂಧಿತ ಆರೋಪಿ. ಆರೋಪಿ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಅಡ್ಡಿಯಾಗಿದ್ದ ತನ್ನ ಪತ್ನಿ ಗೌರಮ್ಮಳನ್ನು ತೋಟದಲ್ಲಿ ಸುತ್ತೋಣವೆಂದು ಕರೆದುಕೊಂಡು ಹೋಗಿ, ಪಕ್ಕದಲ್ಲಿ ಹರಿಯುತ್ತಿರುವ ಹಳ್ಳದಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಗಿ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
ಎಎಸ್ಪಿಗಳಾದ ವಿಜಯ್ ಕುಮಾರ್ ಎಂ ಸಂತೋಷ್, ಮಂಜುನಾಥ, ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಶ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಬಾಲಚಂದ್ರ ನಾಯ್ಕ ಅವರ ನೇತೃತ್ವದಲ್ಲಿ ಸಿಬ್ಬಂದಿಗಳನ್ನೊಳಗೊಂಡ
ತಂಡ ಆರೋಪಿ ಚಿದಾನಂದ ಆಚಾರಿ ಎಂಬುವನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.