Connect with us

Dvgsuddi Kannada | online news portal | Kannada news online

ದಾವಣಗೆರೆ ಬಂದ್; ಬಲವಂತವಾಗಿ ಶಾಲಾ, ಕಾಲೇಜು, ಅಂಗಡಿ ಮುಂಗಟ್ಟು ಮುಚ್ಚಿದ್ರೆ ಕಾನೂನು ಕ್ರಮ ; ಜಿಲ್ಲಾ ಪೊಲೀಸ್ ಎಚ್ಚರಿಕೆ

ದಾವಣಗೆರೆ

ದಾವಣಗೆರೆ ಬಂದ್; ಬಲವಂತವಾಗಿ ಶಾಲಾ, ಕಾಲೇಜು, ಅಂಗಡಿ ಮುಂಗಟ್ಟು ಮುಚ್ಚಿದ್ರೆ ಕಾನೂನು ಕ್ರಮ ; ಜಿಲ್ಲಾ ಪೊಲೀಸ್ ಎಚ್ಚರಿಕೆ

ದಾವಣಗೆರೆ: ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಉಳಿವು ಮತ್ತು ಪೇಮೆಂಟ್ ಸೀಟ್ ರದ್ದುಪಡಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ನಾಳೆ (ಅ.16) “ದಾವಣಗೆರೆ ಬಂದ್ ” ಕರೆ ನೀಡಿಲಾಗಿದೆ. ಬಲವಂತವಾಗಿ ಶಾಲಾ, ಕಾಲೇಜು, ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ. ಸಾರ್ವಜನಿಕ ಶಾಂತಿಗೆ ಭಂಗ ತಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು‌ ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.

ಈ ಸಂಬಂಧ ವಿವಿಧ ಸಂಘಟನೆಗಳು ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿರುವುದ ತಿಳಿದು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಬಂದ್ ಕರೆ ನೀಡಿದ ಆಯೋಜಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವುದು ಸೂಚನೆ ನೀಡಲಾಗಿದೆ.

  • ಬಂದ್ ಕರೆ ಸಂಬಂಧ ಘನ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವಂತಿಲ್ಲ
  • ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ/ಖಾಸಗಿ ಸಂಸ್ಥೇಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ, ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು
  • ಬಂದ್ ಸಂಬಂಧ ಸಾರ್ವಜನಿಕರ ಜನ-ಜೀವನಕ್ಕೆ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ
  • ಯಾವುದೇ ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ ಮತ್ತು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು
    ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ
  • ರಸ್ತೆ / ಸಾರ್ವಜನಿಕ ಸ್ಥಳಗಳಲ್ಲಿ ಟಯರ್‌ಗಳನ್ನು ಹಾಕಿ ಹಚ್ಚಲು ಮತ್ತು ಯಾವುದೇ ಪ್ರತಿಕೃತಿಗಳನ್ನು ದಹನ ಮಾಡಲು ಅವಕಾಶವಿರುವುದಿಲ್ಲ
  • ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದಾಗಿ ತಿಳಿಸಿದೆ.
  • ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು
  • ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಪ್ರತಿಭಟನೆ ನಡೆಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದ್ರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡುವುದು

ಬಂದ್ ಸಂಬಂಧ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವತಿಯಿಂದ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳನ್ನು ನಿಯೋಜಿಸಲಾಗಿರುತ್ತದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top