ದಾವಣಗೆರೆ: ರಾಜ್ಯ ಸರ್ಕಾರ ಪತನಗೊಳಿಸಲು ಕೆಲ ನಾಯಕರು 1 ಸಾವಿರ ಕೋಟಿ ಹಣ ಸಂಗ್ರಹಿಸಿಕೊಂಡಿದ್ದು, ಮುಖ್ಯಮಂತ್ರಿಯಾಗಲು ಸಂಚು ರೂಪಿಸಿದ್ದಾರೆಂದು ಇತ್ತೀಚೆಗೆ ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಗಾಂಧಿ ನಗರ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದೂರು ನೀಡಿದ್ದಾರೆ.
ಸರ್ಕಾರ ಪತನಗೊಳಿಸಲು ಬಿಜೆಪಿ ಸಂಚು ರೂಪಿಸಿರುವುದು, ಪಕ್ಷಗಳ ಮಧ್ಯೆ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ ಬೆಂಗಳೂರಿನ ಹೈಗೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಕಲಿಸಿದ್ದರು. ಈ ದೂರರಿನ ಕಡತವನ್ನು ಅ.14ರಂದು ದಾವಣಗೆರೆ ಗಾಂಧಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಅಧಿಕಾರಿಗಳು ಕಡತ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್.ಮನೋಹರ ಗಾಂಧಿ ನಗರ ಠಾಣೆಗೆ ಹಾಜರಾಗಿ, ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಬಸವನಗೌಡ ಪಾಟೀಲ್ ಯತ್ನಾಳ್ , ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ, ಪ್ರತಾಪ ಸಿಂಹ, ಶಾಸಕ ಹರೀಶ ಸೇರಿ ಇತರೆ ಮುಖಂಡರು ದಾವಣಗೆರೆ ಜಿಎಂಐಟಿ ಅತಿಥಿಗೃಹದಲ್ಲಿ ಸಭೆ ಮಾಡಿದ್ದರು. ಈ ಸಭೆಯಲ್ಲಿ ಯತ್ನಾಳ್ ಈ ಆರೋಪ ಮಾಡಿದ್ದರು.



