ದಾವಣಗೆರೆ: ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ನಾಲ್ಕು ಟ್ರ್ಯಾಕ್ಟರ್ ಮತ್ತು 50 ಸಾವಿರ ಬೆಲೆಯ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹನಗವಾಡಿ ಸಮೀಪದ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗುತ್ತಿತ್ತು. ಸಿಪಿಐ ಸುನಿಲ್‍ಕುಮಾರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಬರುತ್ತುದ್ದಂತೆ ಚಾಲಕರುಬ ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ 50,000 ಮೌಲ್ಯದ ಮರಳು ಮತ್ತು 4 ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಎಎಸ್‍ಐ ಹರೀಶ್, ಸಿಬ್ಬಂದಿ ಮಂಜುನಾಥ್, ಹೇಮನಾಯ್ಕ, ಮನೋಹರ್ ಹಾಗೂ ಪ್ರಸನ್ನ ಇದ್ದರು.



