ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಹಾಳ್ ಮಟ್ಟಿ ಕ್ಯಾಂಪ್‌ನ ಮನೆಯೊಂದರಲ್ಲಿ ಹಿಂಬಾಗಿಲು ಮುರಿದು ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಕ್ಯಾಂಪ್‌ನ ಕವಿತಾ ಅವರ ಮನೆಯ ಹಿಂಬಾಗಿಲು ಮುರಿದು ಒಳ ಬಂದರ ಕಳ್ಳರು, ಬೀರುವಿನಲ್ಲಿದ್ದ 40,000 ಹಾಗೂ 8 ತೊಲದ ಮಾಂಗಲ್ಯ ಸರ, ನೆಕ್ಲೆಸ್, ಕಿವಿಯೋಲೆ ಕಳ್ಳನ ಮಾಡಿಕೊಂಡು ಹೋಗಿದ್ದಾರೆ ಎಂದು ಕವಿತಾ ಮಲೇಬೆನ್ನೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.



