ದಾವಣಗೆರೆ: ಮಟ್ಕಾ ಜೂಜಾಟದ ಮೇಲೆ ಪೊಲೀಸ್ ದಾಳಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳಿಂದ 25 ಸಾವಿರ ನಗರದು ವಶಕ್ಕೆ ಪಡೆಯಲಾಗಿದೆ.
ಜ.27ರಂದು ಮಲೇಬೆನ್ನೂರು ಬಳಿಯ ಕೋಮಾರನಹಳ್ಳಿ ರಂಗನಾಥ ಸ್ವಾಮಿ ದೇವಸ್ಥಾನದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆದಿದೆ. ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಸುನೀಲ್ ಬಿ ತೇಲಿ ಹಾಗೂ ಸಿಬ್ಬಂದಿಗಳಾದ ಗೋವಿಂದರಾಜು, ಮುತ್ತುರಾಜು, ಬುಡೇನ್ ವಲಿ ರವರನ್ನು ಒಳಗೊಂಡ ತಂದ ದಾಳಿ ಮಾಡಲಾಗಿದೆ.
ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿತರುಗಳಾದ 01) ರಂಗಪ್ಪ (67), 2) ಕಿಶೋರ್ ( 27) ವಶಕ್ಕೆ ಪಡೆದಿದ್ದು, ಆರೋಪಿಗಳಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ 25,000 ನಗದು ಹಣವನ್ನು & ಮಟ್ಕಾ ಚೀಟಿಗಳನ್ನುವಶಕ್ಕೆ ಪಡೆಯಲಾಗಿದೆ. ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.