ದಾವಣಗೆರೆ: ಅಂದರ್ ಬಾಹರ್ ಇಸ್ಫೀಟ್ (ispit) ಜೂಜಾಟದ ಮೇಲೆ ಸಿಇಎನ್(CYBER ECONOMIC NARCOTICS) ಪೊಲೀಸ್ ದಾಳಿ ಮಾಡಿದ್ದು, 26 ಜನರನ್ನು ಬಂಧಿಸಿ 24.86 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.
ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ ರದ್ದು
ದಿನಾಂಕ 21-02-2025 ರಂದು ದಾವಣಗೆರೆ ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿರುವ ಮ್ಯಾಂಗೋ ಹೋಟೆಲ್ ನಲ್ಲಿ ಅಂದರ್ ಬಾಹರ್ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾವಣಗೆರೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ್, ಮಂಜುನಾಥ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ ನೇತೃತ್ವದಲ್ಲಿ ಪಿ.ಎಸ್.ಐ ಸುನೀಲ್ ಬಿ ತೇಲಿ ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ಮಾಡಿದೆ. ಅಂದರ್ ಬಾಹರ್ ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದ 26 ಜನರನ್ನು ವಶಕ್ಕೆ ಪಡೆದು ಆರೋಪಿಗಳಿಂದ ಅಂದರ್ ಬಾಹರ್ ಇಸ್ಫೀಟ್ ಜೂಜಾಟದಲ್ಲಿ ತೊಡಗಿಸಿದ್ದ 24,86,500/- ರೂ ನಗದು ಹಣವನ್ನು & ಇಸ್ಫೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಾಳಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಾದ ಗೋವಿಂದರಾಜು, ಶಿವಕುಮಾರ, ಅಶೋಕ, ಲೋಹಿತ್, ಉಮೆಶ್, ಅಂಜಿನಪ್ಪ, ನಿಜಲಿಂಗಪ್ಪ, ರವಿಕುಮಾರ, ಲಿಂಗರಾಜು, ಬುಡೇನ್ ವಲಿ, ಸುರೇಶ್ ಇವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.