ದಾವಣಗೆರೆ: ರೌಡಿಶೀಟರ್‌ನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ನಗರದ ಹದಡಿ ರಸ್ತೆಯ ಮಳಿಗೆಯೊಂದರಲ್ಲಿ ಈ ಹ*ತ್ಯೆ ನಡೆದಿದೆ. ಸಂತೋಷಕುಮಾರ್ ಅಲಿಯಾಸ್ ಕಣುಮ ಸಂತೋಷ್ (50) ಎ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊ*ಲೆ ಮಾಡಲಾಗಿದೆ.
ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಮಳಿಗೆಯಲ್ಲಿ ಕುಳಿತಿದ್ದಾಗ ಆಟೋದಲ್ಲಿ ಬಂದ ಗುಂಪುವೊಂದು ಕಣುಮನ ಮುಖಕ್ಕೆ ಕಾಳುಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹೊಡೆದು ಹ*ತ್ಯೆ ಮಾಡಿ ಪರಾರಿಯಾಗಿದ್ದಾರೆ. ರಿಯಲ್ ಎಸ್ಟೇಟ್ ನಲ್ಲಿ ತೊಡಗಿಕೊಂಡಿದ್ದ ಕೆಟಿಜೆ ನಗರದ ನಿವಾಸಿಯಾದ ಕಣುಮನ ವಿರುದ್ಧ ಕೊಲೆ, ವಂಚನೆ ಸೇರಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿಗಳ ತಂಡವೊಂದು ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ರೌಡಿಶೀಟರ್ ಬುಳ್ಳ ನಾಗನ ಕೊಲೆ ಪ್ರಕರಣದಲ್ಲಿ ಕಣುಮ ಪ್ರಮುಖ ಆರೋಪಿಯಾಗಿದ್ದನು.
ಕೊ*ಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ತನಿಖೆಗೆ ಡಿವೈಎಸ್‌ಪಿ ಶರಣ ಬಸವೇಶ್ವರ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.



