Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಕ್ರೈಂ ಸುದ್ದಿ

ದಾವಣಗೆರೆ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ದಾವಣಗೆರೆ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಆರೋಪಿಯಿಂದ 20 ಸಾವಿರ ಮೌಲ್ಯದ 900 ಗ್ರಾಂ ಗಾಜಾ‌, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.‌ ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ನರಸಿಂಹ ವಿ. ತಾಮ್ರಧ್ವಜ‌ ಮಾರ್ಗದರ್ಶನದಲ್ಲಿ ಸಿಪಿಐ ಗಜೇಂದ್ರಪ್ಪ‌‌ ನೇತೃತ್ವದಲ್ಲಿ ಪಿಎಸ್ ಐ ಎಚ್. ಪ್ರಮೀಳಮ್ಮ , ಪಿಎಸ್ ಐ ಶಮೀಮ್ ಉನ್ನಿಸಾ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಎಸ್ ಪಿ ರಿಷ್ಯಂತ್ ಹಾಗೂ ಹೆಚ್ಚುವರಿ ಎಸ್ ಪಿ ಆರ್ .ಬಿ‌ ಬಸರಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top