ದಾವಣಗೆರೆ: ಇತ್ತೀಚೆಗೆ ದಾವಣಗೆರೆಯಲ್ಲಿ ರೌಡಿಶೀಟರ್ ಕೊಲೆ ಪ್ರಕರಣ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ತಡೆ ನಿಟ್ಟಿನಲ್ಲಿ ಪೊಲೀಸರು ಇಂದು (ಮೇ 15) ಬೆಳ್ಳಂಬೆಳಗ್ಗೆ ರೌಡಿಶೀಟರ್ ಮನೆಗಳಿಗೆ ದಿಢೀರ್ ಭೇಟಿ ನೀಡಿ, ಮನೆಯ ಇಂಚಿಂಚೂ ಜಾಲಾಡಿದರು.
ಎಸ್ಪಿ ಪ್ರಶಾಂತ್ , ಎಎಸ್ಪಿಗಳಾದ ವಿಜಯ್ ಕುಮಾರ್ ಎಂ ಸಂತೋಷ್, ಜಿ. ಮಂಜುನಾಥ್ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್, ನಗರ ಡಿವೈಎಸ್ಪಿ ಬಿ. ಶರಣ ಬಸವೇಶ್ವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ಒಟ್ಟು 46 ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದ್ರೆ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದರು.



