Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮ ಗಾಂಜಾ ಸಂಗ್ರಹ; 1.20 ಲಕ್ಷ ಮೌಲ್ಯದ ಗಾಂಜಾ ವಶ

dvg crime 2

ಚನ್ನಗಿರಿ

ದಾವಣಗೆರೆ: ಅಕ್ರಮ ಗಾಂಜಾ ಸಂಗ್ರಹ; 1.20 ಲಕ್ಷ ಮೌಲ್ಯದ ಗಾಂಜಾ ವಶ

ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 1.20 ಲಕ್ಷ ಮೌಲ್ಯದ 01 ಕೆಜಿ 150 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಳೆನೂರು ಗ್ರಾಮದ ಹನುಮಂತಪ್ಪ ಎಂಬುವರ ಮಾವಿನ ತೋಟದಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಎಎಸ್ಪಿ ಮಂಜುನಾಥ ಜಿ, ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಸಂತೆಬೆನ್ನೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ಮುಂದಾಳತ್ವದಲ್ಲಿ ಸಂತೇಬೆನ್ನೂರು ಪೊಲೀಸ್ ಠಾಣೆಯ ಪಿ ಎಸ್ ಜಗದೀಶ್ ಜಿ (ಕಾ&ಸು) ನೇತೃತ್ವದಲ್ಲಿ ಚನ್ನವೀರಪ್ಪ (ತನಿಖೆ) ಹಾಗು ಸಿಬ್ಬಂದಿಗಳನ್ನೊಳಗೊಂಡ ತಂಡವು ದಾಳಿ ‌ನಡೆಸಿದೆ.

ಅಕ್ರಮವಾಗಿ ಗಾಂಜಾ ಸಂಗ್ರಹ ಮಾಡಿದ್ದ ಆರೋಪಿ ಜಾಕೀರ್ , ವಾಸ: ಸಂತೆಬೆನ್ನೂರು ಗ್ರಾಮ, ಚನ್ನಗಿರಿ ತಾಲ್ಲೂಕು ಈತನನ್ನು ಬಂಧಿಸಲಾಗಿದೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 1,20.000/- ರೂ ಬೆಲೆ ಬಾಳುವ 01 ಕೆಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top