ದಾವಣಗೆರೆ: ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಬಿ.ಆರ್.ನಾಗರಾಜಪ್ಪ (58) ತುಮಕೂರಿನ ಖಾಸಗಿ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೋಟೆಲ್ ಕೋಣೆಯಿಂದ ಕೆಟ್ಟ ವಾಸನೆ ಬಙದ ಕಾಟೆಣ ಹೋಟೆಲ್ ಸಿಬ್ಬಂದಿ ಡೋರ್ ಓಪನ್ ಮಾಡಿದ್ದಾರೆ. ಆಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಜುಲೈ 1ರಂದು ಹೋಟೆಲ್‌ನಲ್ಲಿ ಕೊಠಡಿ ಪಡೆದಿದ್ದು, ಇಂದು (ಜು.06) ಶವ ಪತ್ತೆಯಾಗಿದೆ.
ಜೂನ್ 30 ರಂದು ಮನೆಯಿಂದ ಹೊರ ಹೋಗಿದ್ದು, ಕುಟುಂಬಸ್ಥರು ಜುಲೈ 2ರಂದು ಕೆಟಿಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾಗರಾಜಪ್ಪ 1993ರಲ್ಲಿ ಕಾನ್‌ಸ್ಟೇಬಲ್ ಆಗಿ ಪೊಲೀಸ್ ಇಲಾಖೆ ಸೇರಿದ್ದರು. ನಂತರ ಬಡ್ತಿ ಪಡೆದು ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಈ ಬಗ್ಗೆ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.



