ದಾವಣಗೆರೆ: ತೇರು ಎಳೆಯುವಾಗ ತೇರಿಗೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನಪ್ಪಿದ್ದು,15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ
ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಈ ಘಟನರ ನಡೆದಿದೆ ಅರ್ಜುನ್ (20) ಮೃತಪಟ್ಟ ಯುವಕನಾಗಿದ್ದಾನೆ. ಇಂದು ಬೆಳಗ್ಗೆ ಗ್ರಾಮದ ದುರ್ಗಮ್ಮ ದೇವಿಯ ಜಾತ್ರೆಯ ಸಂದರ್ಭ ತೇರು ಎಳೆಯುವಾಗ ಈ ಅವಘಡ ಸಂಭವಿಸಿದೆ. 15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



