ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಪತಿ ಕೊ*ಲೆ; ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ತಲಾ 55 ಸಾವಿರ ದಂಡ

ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊ*ಲೆ ಮಾಡಿ ಮನೆಯ ದೇವರ ಕೋಣೆಯಲ್ಲಿ ಹೂತು ಹಾಕಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 55 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶ ಮಾಡಿದೆ.

ಜಿಲ್ಕೆಯ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ ಗ್ರಾಮದ ಜಗದೀಶ (64) ಹಾಗೂ ಗಂಗಮ್ಮ (54) ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಪತಿ ಲಕ್ಷ್ಮಣ್‌ ಎಂಬುವವರನ್ನು ಈ ಇಬ್ಬರು ಅಪರಾಧಿಗಳು 2015ರ ಸೆ.8ರಂದು ಕೊಲೆ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ.ಎಚ್‌. ಅಣ್ಣಯ್ಯನವರ್ ಶಿಕ್ಷೆ ಆದೇಶ ‌ಹೊರಡಿಸಿದ್ದಾರೆ.

ಲಕ್ಷ್ಮಣ್‌, ಗಂಗಮ್ಮ ದಂಪತಿಯ ಮನೆಗೆ ಜಗದೀಶ್‌ ಭೇಟಿ ನೀಡುತ್ತಿದ್ದನು. ಅನೈತಿಕ ಸಂಬಂಧ ಹೊಂದಿದ್ದ ಗಂಗಮ್ಮ ಮತ್ತು ಜಗದೀಶ್‌ ಏಕಾಏಕಿ ಲಕ್ಷ್ಮಣ್‌ ಮೇಲೆ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಲಕ್ಷ್ಮಣ್ ಮೃ*ತಪಟ್ಟಿದ್ದರು. ಕೊ*ಲೆ ಅಪರಾಧಿಗಳು ಮನೆಯ ದೇವರ ಕೋಣೆಯಲ್ಲಿ ಗುಂಡಿ ತೆಗೆದು ಶವ ಹೂತುಹಾಕಿದ್ದರು. ಈ ಸಂಬಂಧ ಗಂಗಮ್ಮ ಮತ್ತು ಲಕ್ಷ್ಮಣ್‌ ದಂಪತಿಯ ಪುತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts