ದಾವಣಗೆರೆ: ಅಕ್ರಮವಾಗಿ ಗಾಂಜಾಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳಿಂದ 1220 ಗ್ರಾಂ ಗಾಂಜಾ ಸೊಪ್ಪು, ಒಂದು ಹೊಂಡಾ ಆಕ್ಟಿವಾ ಸ್ಕೂಟರ್ ಸೇರಿ ಒಟ್ಟು 2 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ.
ನಗರದ ಯರಗುಂಟೆ ಗ್ರಾಮದ ಕೊಂಡಜ್ಜಿ ರಸ್ತೆಯ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಯಾರೋ ಇಬ್ಬರು ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿರುವ ಪಿಎಸ್ ಐ ಸಾಗರ್ ಅತ್ತರ್ ಅವರು ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮವಾಗಿ ಮಾದಕ ದ್ರವ್ಯ ಮಾರಾಟ ಹಾಗೂ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಸ್ಪಿ ಉಮಾ ಪ್ರಶಾಂತ್, ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ಪಡೆಯನ್ನು ರಚಿಸಿದ್ದು, ದಾವಣಗೆರೆ ಜಿಲ್ಲೆಯನ್ನು ಮಾದಕ ವ್ಯಸನಮುಕ್ತ ಜಿಲ್ಲೆಯನ್ನಾಗಿಸುವ ಕಾರ್ಯದಲ್ಲಿ ವಿಶೇಷ ಕಾರ್ಯಚರಣೆ ನಡೆಸಲು ಸೂಚನೆ ನೀಡಿದ್ದಾರೆ.
ಅಕ್ರಮವಾಗಿ ಗಾಂಜಾ ಸೊಪ್ಪನ್ನು ಮಾರಾಟ ಮಾರಾಟ ಮಾಡುತ್ತಿದ್ದ ಆರೋಪಿಗಳಾದ ದಸ್ತಗಿರಿ (35) ರಾಜೀವಗಾಂಧಿ ಬಡಾವಣೆ, ದಾವಣಗೆರೆ, 2) ಭರತ್ ಕುಮಾರ್ ಎಂ.ಎಸ್ (22) ವರ್ಷ, ಬಿ ಫಾರ್ಮ ವ್ಯಾಸಂಗ, ರಂಗನಾಥ ಬಡಾವಣೆ ಇವರನ್ನು ಬಂಧಿಸಿದ್ದು, ಆರೋಪಿತರಿಂದ ಮಾರಾಡ ಮಾಡಲು ಬೈಕಿನಲ್ಲಿ ಇಟ್ಟುಕೊಂಡಿದ್ದ 1220 ಗ್ರಾಂ ಗಾಂಜಾ ಸೊಪ್ಪು 2) ಒಂದು ಹೊಂಡಾ ಆಕ್ಟಿವಾ ಸ್ಕೂಟರ್ ಸೇರಿ ಅಂದಾಜು 2,00,000 ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿರುತ್ತದೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿದ್ದಾರೆ.



