ದಾವಣಗೆರೆ: ಎಸ್.ಪಿ ಉಮಾ ಪ್ರಶಾಂತ್ ಅವರಿಗೆ ಅವಹೇಳನಕಾರಿ ಹೇಳಿಕೆ ನೀಡಿದ ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಬಿ.ಪಿ.ಹರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಎಸ್ಪಿಯವರನ್ನು ನಾಯಿಗೆ ಹೋಲಿಸಿ ಅವಹೇಳ ಮಾಡಿದ್ದರು. ಈ ಸಂಬಂಧ ಶಾಸಕರ ವಿರುದ್ದ ಸ್ವತಃ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಎಸ್ಪಿ ಬಗ್ಗೆ ಶಾಸಕರು ಹೇಳಿದ್ದೇನು..?
ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಶಾಸಕರಿಗೆ ಬೆಲೆಯೇ ಕೊಡುವುದಿಲ್ಲ. ಶಾಸಕರು ಸಭೆಯಲ್ಲಿ ಇದ್ದರೆ ಮುಖ ತಿರುಗಿಸಿ ಕೂರುತ್ತಾರೆ. ಗಂಟೆಗಟ್ಟಲೆ ಶಾಮನೂರು ಮನೆಯ ಬಾಗಿಲು ಕಾಯುತ್ತಾರೆ. ಎಸ್ಪಿ ಶಾಮನೂರು ಕುಟುಂಬದ ಪೊಮೆರಿಯನ್ ನಾಯಿಯಂತೆ ವರ್ತಿಸುತ್ತಾರೆ. ಇವರಿಗೆ ಅಧಿಕಾರದಲ್ಲಿರುವವರು ಮಾತ್ರ ಮುಖ್ಯವಾಗಿ ಕಾಣುತ್ತಾರೆ ಎನ್ನಿಸುತ್ತದೆ. ಎಲ್ಲಾ ಜನಪ್ರತಿನಿಧಿಗಳನ್ನು ಸಮಾನವಾಗಿ ಕಾಣುವ ದೃಷ್ಟಿಕೋನ ಇಲ್ಲ. ಈ ಅಧಿಕಾರ ತಾತ್ಕಾಲಿಕ ಅನ್ನುವುದನ್ನು ಎಸ್ಪಿ ಅರಿತುಕೊಳ್ಳಬೇಕು ಎಂದು ಟೀಕಿಸಿದ್ದರು.



