ದಾವಣಗೆರೆ: ಶಾಮನೂರು ಕುಟುಂಬದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ವಿರುದ್ಧ ಜಿಲ್ಲಾ ಪೊಲೀಸ್ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ
ದಾವಣಗೆರೆ ಜಿಲ್ಲಾ ಪೊಲೀಸ್ ಸೈಬರ್ ಕ್ರೈಂ ಠಾಣೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಲೀಗಲ್ ದೂರು ದಾಖಲಿಸಿದೆ. ರವಿರಾಜ್ ವಿ. ಹಿಂದೂ ಮತ್ತು ದರ್ಶನ್ ಪವರ್ ಎಂಬ ಹೆಸರಿನ ಫೇಸ್ ಬುಕ್ ಖಾತೆದಾರನಿಂದ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ.
ಎಸ್. ಎಸ್. ಮಲ್ಲಿಕಾರ್ಜನ್ , ಹಿಂದು ಮತ್ತು ಮುಸ್ಲಿಂ ಬಾಂಧವರು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ಕರೆನೀಡಿದ ವಿಡಿಯೋವನ್ನು ತಿರುಚಲಾಗಿದೆ. ವಿಡಿಯೋ ಎಡಿಟ್ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಫೇಸ್ ಬುಕ್ ನಲ್ಲಿ ವಿಡಿಯೋ ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಲೀಗಲ್ ಸೆಲ್ ಚೇರ್ಮನ್ ಡಿ. ಸಿ. ರಾಕೇಶ್, ಹರೀಶ್, ವಿವೇಕ್, ಲೀಗಲ್ ಸೆಲ್ ಕಮಿಟಿಯ ಉಪಾಧ್ಯಕ್ಷ ನವೀನ್ ಹೊರಟ್ಟಿ ದೂರು ನೀಡಿದ್ದಾರೆ.