ದಾವಣಗೆರೆ: ವ್ಯಕ್ತಿಯೊಬ್ಬ ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ಪಿ.ಎ ಎಂದು ಹೇಳಿಕೊಂಡು ದಾವಣಗೆರೆ ಜಿಲ್ಲಾಧಿಕಾರಿಗೆ ಕರೆ ಮಾಡಿ ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಂಡು ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಸರ್ಕಾರಿ ಅಧಿಕಾರಿಯ & ಆಪ್ತ ಸಹಾಯಕರ ಸೋಗಿನಲ್ಲಿ ನಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ವಂಚನೆ ಮಾಡಿದ್ದ ಆರೋಪಿ ಕಾರವಾರದ ವಿದ್ಯಾರ್ಥಿ ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ(20) ಈತನನ್ನು ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರು ನೀಡಿದ ದೂರಿನ ಮೇರೆಗೆ ಗಾಂಧಿನಗರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಎಸ್ಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಎಎಸ್ಪಿ ಪರಮೇಶ್ವರ ಹೆಗಡೆ ಹಾಗೂ ಡಿವೈಎಸ್ಪಿ ಶರಣಬಸವೇಶ್ವರ ಬಿ ಮತ್ತು ವೃತ್ತ ನಿರೀಕ್ಷಕ ಬಾಲಚಂದ್ರ ನಾಯ್ಕ್ ಮಾರ್ಗದರ್ಶನದಲ್ಲಿ ವಂಚಿಸಿದ ಆರೋಪಿಯನ್ನು ಗಾಂಧಿನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ರವಿನಾಯ್ಕ್ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.



