ದಾವಣಗೆರೆ: ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದ ಐ ಲವ್ ಮೊಹಮ್ಮದ್ ಫ್ಲೆಕ್ಸ್ ಸಂಘರ್ಷ ರಾಜ್ಯಕ್ಕೂ ಕಾಲಿಟ್ಟಿದ್ದು, ಈ ಬಗ್ಗೆ ದಾವಣಗೆರೆಯಲ್ಲಿ ನಡೆದ ಗಲಭೆ ನಡೆದಿದದೆ. ಈ ಪ್ರಕರಣ ಸಂಬಂಧ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಐ ಲವ್ ಮೊಹಮ್ಮದ್ ಫ್ಲೆಕ್ಸ್ ಕಟ್ಟುವ ವಿಚಾರವಾಗಿ ಸೆ. 24ರಂದು ರಾತ್ರಿ ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಗಲಾಟೆ ನಡೆದಿತ್ತು. ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿತ್ತು. ಆಜಾದ್ ನಗರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿತ್ತು.
ಜಿಲ್ಲಾ ಪೊಲೀಸರು ನಾಲ್ಕು ಪ್ರತ್ಯೇಕ ತಂಡಗಳಿಂದ ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್. ಪಿ ಉಮಾಪ್ರಶಾಂತ್ ತಿಳಿಸಿದ್ದಾರೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಎರಡು ಕೋಮಿನ ಮುಖಂಡರು, ನಾಗರಿಕರು ಪೊಲೀಸರ ಜೊತೆ ಸಹಕರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಬಾರದು. ಹಾಗೇನಾದರೂ ಕಂಡುಬಂದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.



