ದಾವಣಗೆರೆ: ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು (sand) ಸಾಗಾಟ ಮಾಡುತ್ತಿದ್ದ. ಐದು ಟ್ರ್ಯಾಕ್ಟರ್‌ಗಳನ್ನು ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಪರವಾನಿಗೆ ಇಲ್ಲದೆ, ಮರಳು ಸಾಗಾಟ
ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೇಲಿ ಮಲ್ಲೂರು ಗ್ರಾಮದ ಸಮೀಪದಲ್ಲಿ ಈ ದಾಳಿ ನಡೆದಿದೆ. ಸಿಪಿಐ ಸುನೀಲ್‍ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ, ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ, ಮರಳು ಸಾಗಾಟ ನಡೆಸುತ್ತಿದ್ದರು.ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಮರಳು ತುಂಬಿದ 5 ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.