ದಾವಣಗೆರೆ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ 5 ಟ್ರ್ಯಾಕ್ಟರ್ ಸಹಿತ ಮರಳನ್ನು ಚನ್ನಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿದ ಚನ್ನಗಿರಿ ಪೊಲೀಸರು, 5 ಟ್ರ್ಯಕ್ಟರ್ ಸಹಿತ ಅಕ್ರಮ ಮರಳು ವಶಕ್ಕೆ ಪಡೆದಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಧು ಪಿ.ಬಿ ನೇತೃತ್ವದಲ್ಲಿ ಪಿಎಸ್ ಐ ನಾಗರಾಜ್, ಸಿಬ್ಬಂದಿಗಳಾದ ರೇವಣ್ಣ, ಸತೀಶ್ ದಾಳಿಯಲ್ಲಿ ಪಾಲ್ಗೊಂಡಿದ್ದರು.
ವಶಪಡಿಸಿಕೊಂಡ ಮರಳನ್ನು ದಂಡ ವಿಧಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಈ ಪ್ರಕರಣ ಬೇಧಿಸಿದ ಚನ್ನಗಿರಿ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಶ್ಲಾಘಿಸಿದ್ದಾರೆ.