ದಾವಣಗೆರೆ: ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಎಟಿಮ್ ಕಳ್ಳರು ದರೋಡೆ ಮಾಡಿದ್ದಾರೆ. ಆಕ್ಸಿಸ್ ಬ್ಯಾಂಕ್ ಎಟಿಮ್ ಕಳೆದ ರಾತ್ರಿ ದರೋಡೆಯಾಗಿದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿದ್ದು, ಶ್ವಾನದಳದೊಂದಿಗೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಎಟಿಮ್ ಕ್ಯಾಶ್ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ದಾವಣಗೆರೆ ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.