ದಾವಣಗೆರೆ: ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಗೆ ನೀರು ಹಾಯಿಸಲು ಹೋಗಿದ್ದ ರೈತನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನ ದೇವಿಕೆರೆ ಗ್ರಾಮದಲ್ಲಿ ನಡೆದಿದೆ.
ಶಿವಪ್ರಕಾಶಯ್ಯ ಸಾವನ್ನಪ್ಪಿದ ರೈತನಾಗಿದ್ದಾನೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಸಿಂಕ್ಲರ್ ಪೈಪ್ ಎತ್ತಿ ಹಾಕುವಾಗ ವಿದ್ಯುತ್ ಸ್ಪರ್ಶಿಸಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.