ದಾವಣಗೆರೆ: ಬೆಳ್ಳಂಬೆಳಗ್ಗೆ ಜಿಲ್ಲೆಯಲ್ಲಿ ಭೀಕರ ದುರಂತ ನಡೆದಿದ್ದು, ಮನೆಯ ಅಡುಗೆ ಸಿಲಿಂಡರ್ ಸ್ಪೋಟಗೊಂಡು 6 ಜನರಿಗೆ ಗಾಯವಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಜಿಲ್ಲೆಯ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.
ಮುನೀರ್ ಸಾಬ್ (65), ಸುಲ್ತಾನ್ (18), ಅಲ್ತಾಫ್ (15), ತಮನ್ನಾ (14), ಶಬೀನಾ ಬಾನು (34), ಫರೀದಾ ಬಾನು ( 58) ಗಾಯಗೊಂಡವರು. ಮುನೀರ್ ಸಾಬ್ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಹಾರಿಹೋಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆ ಎದ್ದ ತಕ್ಷಣ ಗ್ಯಾಸ್ ಅನ್ ಮಾಡಲು ಹೋದಾಗ ಹೋದಾಗ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಮನೆಯ ವಸ್ತುಗಳು ಚೆಲ್ಲಾಪಿಲ್ಲಿಗಿದ್ದು, ಮೇಲ್ಭಾವಣಿಗೆ ಹಾಕಿದ್ದ ಶೀಟ್ಗಳು ಹಾರಿಹೋಗಿವೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಪೋಟಗೊಂಡ ಕೂಡಲೇ ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



