ದಾವಣಗೆರೆ: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನೆಲೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಿಗಿ , ಮೇಯರ್ ಎಸ್. ಟಿ. ವೀರೇಶ್, ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಸೈಕಲ್ ಜಾಥಾ ನಡೆಸಿದರು. ನಗರದ ರಿಂಗ್ ರಸ್ತೆಯ ಗಡಿಯಾರ ಕಂಬದ ಬಳಿಯಿಂದ ಪ್ರಮುಖ ರಸ್ತೆಗಳಲ್ಲಿ ಅಧಿಕಾರಿಗಳಿಂದ ಸೈಕಲ್ ಜಾಥಾ ನಡೆಸಲಾಯಿತು. ಈ ವೇಳೆ ಡೋಲುಗಳ ಸಂಭ್ರಮ ಜಾಥಕ್ಕೆ ಮತ್ತೊಷ್ಟು ಕಳೆ ನೀಡಿತ್ತು. ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಆದ ಹಿನ್ನೆರಲೆ ಅಮೃತ ಮಹೋತ್ಸವ ಆಚರಿಸಲಾಗುತ್ತದೆ. ಈ ಬಾರಿ ದೇಶಾದ್ಯಂತ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಿದ್ದರು. ಇದರ ಅಂಗವಾಗಿ ದೇಶದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ಇಂದು ದಾವಣೆಗೆರೆಯಲ್ಲಿ ಕಾಲ್ನಡಿಗೆ ಜಾಥ, ಸೈಕಲ್ ಜಾಥಾ ಆಯೋಜಿಸಲಾಗಿತ್ತು.




