ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ಮಂಜುನಾಥ್ ಗಡಿಗುಡಾಳ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್. ಬಿ. ಮಂಜಪ್ಪ ತಿಳಿಸಿದ್ದಾರೆ.
ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಹಾಗೂ ಕಾಂಗ್ರೆಸ್ ಪಕ್ಷ ಸದಸ್ಯರ ಒಪ್ಪಿಗೆ ಮೇರೆಗೆ ಪಾಲಿಕೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗಿದೆ. ವಿಪಕ್ಷ ನಾಯಕರಾಗಿದ್ದ ಎ. ನಾಗರಾಜ್ ಅವರ ಬದಲಿಗೆ 38 ನೇ ವಾರ್ಡ್ ನ ಪಾಲಿಕೆ ಸದಸ್ಯ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.