Connect with us

Dvgsuddi Kannada | online news portal | Kannada news online

ಸಂಗೀತ ನೃತ್ಯ ತರಬೇತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಸಂಗೀತ ನೃತ್ಯ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ :ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2020-21ನೇ ಸಾಲಿಗೆ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ ಅಭ್ಯಾಸ ಮಾಡುತ್ತಿರುವ/ಹೆಚ್ಚಿನ ಅಭ್ಯಾಸ ಮಾಡಲ್ಚಿಸುವ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಿದೆ.

ಅಭ್ಯರ್ಥಿಗಳು 16 ರಿಂದ 26 ವರ್ಷದ ವಯೋಮಾನದವರಾಗಿರಬೇಕು. ಅರ್ಜಿಯನ್ನು ಅಕಾಡೆಮಿಯ ವೇಳೆಯಲ್ಲಿ ವೆಬ್‍ಸೈಟ್ https//karnatakasangeetanrityaacademy.com ಮೂಲಕ ಪಡೆದು ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದಾಗಿದ್ದು ಜ.30 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.

ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು-560002 ಇಲ್ಲಿಗೆ ಸಲ್ಲಿಸಬೇಕೆಂದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top