Connect with us

Dvgsuddi Kannada | online news portal | Kannada news online

ಆಜಾದಿ ಕಾ ಅಮೃತ್ ಮಹೋತ್ಸವ್ ;  ವಾಕ್‍ಥಾನ್‍ಗೆ ಚಾಲನೆ

ದಾವಣಗೆರೆ

ಆಜಾದಿ ಕಾ ಅಮೃತ್ ಮಹೋತ್ಸವ್ ;  ವಾಕ್‍ಥಾನ್‍ಗೆ ಚಾಲನೆ

ದಾವಣಗೆರೆ:  ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ವಿವಿಧ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಏರ್ಪಡಿಸಿದ ವಾಕ್‍ಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ರಿಷ್ಯಂತ್ ಅವರು ಡೊಳ್ಳು ಬಾರಿಸುವ ಮೂಲಕ ಗುರುಭವನ ಬಳಿ ಚಾಲನೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಸೆ. 29 ರಿಂದಲೇ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಆರಂಭವಾಗಿದ್ದು, ಇದರ ಮುಂದುವರೆದ ಭಾಗವಾಗಿ, ಗುರುವಾರ ನಗರದಲ್ಲಿ ವಾಕ್‍ಥಾನ್ ಏರ್ಪಡಿಸಲಾಯಿತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೀರಗಾಸೆ ಸೇರಿದಂತೆ ಹಲವು ಸಾಂಸ್ಕøತಿಕ ತಂಡಗಳು ಭಾಗವಹಿಸಿದ್ದವು. ವಾಕ್‍ಥಾನ್ ನಗರದ ಗುರುಭವನ ಬಳಿ ಆರಂಭವಾಗಿ, ವಿವಿಧೆಡೆ ಸಂಚರಿಸಿದ ಬಳಿಕ ಗುರುಭವನ ಬಳಿಯೇ ಪೂರ್ಣಗೊಂಡಿತು. ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top