ದಾವಣಗೆರೆ: 2022-23ನೇ ಸಾಲಿನಲ್ಲಿ ಜಿಲ್ಲಾ ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನಿರಾಮಯ ಯೋಜನೆಗೆ ಕಾರ್ಡ್ ವಿತರಣೆಗೆ ಅರ್ಹ ಬುದ್ಧಿಮಾಂದ್ಯ, ಸೆರೆಬ್ರಲ್ ಪಾಲಿಸಿ, ಆಟಿಸಂ ಮತ್ತು ಬಹುವಿಧ ವಿಶೇಷಚೇತನರಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.
ನಿರಾಮಯ ಕಾರ್ಡ್ ಪಡೆಯಲು ಜಿಲ್ಲೆಯ ಆಯಾ ತಾಲ್ಲೂಕಿನ ಮೇಲ್ಕಾಣಿಸಿದ ವಿಶೇಷಚೇತನರು ಕಡ್ಡಾಯವಾಗಿ ಅಂಗವಿಕಲರ ಗುರುತಿನ ಕಾರ್ಡ್ ಜೆರಾಕ್ಸ್ (ಯು.ಡಿ.ಐ.ಡಿ. ಕಾರ್ಡ್), ಇತ್ತೀಚಿನ ಜಾತಿ & ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ್, ಎಲೆಕ್ಷನ್ ಐಡಿ ಕಾರ್ಡ್, ರೇಷನ್ ಕಾರ್ಡ್ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಈ ಕೆಳಕಂಡ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ (ಒಖW) ಕಛೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತೆ ಶೈಲಜಾ.ಕೆ.ಎಂ ಮೊ.ಸಂ: 9886366809, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಸುಬ್ರಮಣ್ಯಂ.ಕೆ ಮೊ.ಸಂ: 9945738141, ಜಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ಕೆ ಶಿವನಗೌಡ ಮೊ.ಸಂ: 9902105734, ಹರಿಹರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಶಶಿಕಲಾ.ಟಿ ಮೊ.ಸಂ: 9945458058, ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಚನ್ನಪ್ಪ.ಬಿ ಮೊ.ಸಂ: 9590829024 ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ ಕೆ.ಕೆ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



