ದಾವಣಗೆರೆ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸುವಂತೆ ಆಗ್ರಹಿಸಿ ಫೆ.14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ರಾಜ್ಯ ಖಜಾಂಚಿ ಆರ್.ಎಸ್. ಬಸವರಾಜ್ ತಿಳಿಸಿದರು.
ಕನಿಷ್ಟ ವೇತನ ನಿಗದಿ ಜತೆ ಖಾಯಂಗೊಳಿಸುವಂತೆ ಒತ್ತಾಯಿಸಲಾಗುವುದು. ಕರ ವಸೂಲಿಗಾರರು, ಕ್ಲರ್ಕ್, ಡಾಟಾ ಎಂಟ್ರಿ, ಆಪರೇಟರ್, ನೀರು ಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಸರ್ಕಾರಿ ನೌಕರರಾಗಿ ಘೋಷಿಸಬೇಕು ಎಂದು ಮನವಿ ಮಾಡಲಾಗುವುದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕರವಸೂಲಿಗಾರರಿಗೆ ಹಾಗೂ ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ ಗಳಿಗೆ 28 ಸಾವಿರ, ನೀರುಗಂಟಿಗಳಿಗೆ ಹಾಗೂ ಜವಾನರಿಗೆ 28 ಸಾವಿರ ಸ್ವಚ್ಛತಾಗಾರರಿಗೆ 25 ಸಾವಿರ ವೇತನ ನೀಡಬೇಕು. ಬಾಕಿ ಇರುವ ಎಲ್ಲಾ ಗ್ರಾಮ ಪಂಚಾಯಿತಿ ನೌಕರರಿಗೆ ಅನುಮೋದನೆ ನೀಡಬೇಕು ಹಾಗೂ ಕನಿಷ್ಟ 6 ಸಾವಿರ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.
ಮುಷ್ಕರದಲ್ಲಿ ದಾವಣಗೆರೆಯಿಂದ 1,500 ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಸ್.ಸಿ. ಶ್ರೀನಿವಾಸ್, ಆನಂದ ರಾಜ್, ಜಿ.ಎನ್. ಬಸವರಾಜ್, ಓಂಕಾರಪ್ಪ, ಹಾಲೇಶ್ ಇನ್ನಿತರರಿದ್ದರು.



