ದಾವಣಗೆರೆ; ನಗರದ ಜೆಜೆಎಂ ವೈದ್ಯಕೀಯ ಮಹಾ ವಿದ್ಯಾಲಯದ ಪೆಥಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಸುರೇಶ್ ಹನಗವಾಡಿ ಅವರು ರಾಷ್ಟ್ರೀಯ ರೋಗ ಲಕ್ಷಣ ಶಾಸ್ತ್ರಜ್ಞರ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಇತ್ತೀಚೆಗೆ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಡಾ. ಹನಗವಾಡಿ ಅವರನ್ನು ಅವಿರೋಧವಾಗಿ ಆಯ್ಕೆ
ಮಾಡಲಾಗಿದೆ. ಸುಮಾರು 30 ವರ್ಷಗಳಿಂದ ರೋಗ ಲಕ್ಷಣ ಕ್ಷೇತ್ರದಲ್ಲಿ ವಿಶೇಷವಾಗಿ ರಕ್ತ ಮತ್ತು ರಕ್ತದ ರೋಗಗಳ ಕ್ಷೇತ್ರದಲ್ಲಿ ಡಾ. ಸುರೇಶ್ ಹನಗವಾಡಿ ಅವರು ಸಾಕಷ್ಟು ಸಂಶೋಧನೆ ಮಾಡಿದ್ದಾರೆ. ವೈದ್ಯಕೀಯ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಬೋಧನೆ ಹಾಗೂ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಹಿಮೊಫಿಲಿಯಾ ಸೊಸೈಟಿಯನ್ನು ಸ್ಥಾಪಿಸಿ, ರಕ್ತಸ್ರಾವ ರೋಗಿಗಳಿಗೆ ವಿಶಿಷ್ಟ ಸೇವೆ ನೀಡುತ್ತಾ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.



