ದಾವಣಗೆರೆ: ನೆಹರು ಯುವ ಕೇಂದ್ರ ಮತ್ತು ಸಮುದಾಯ ಅಭಿವೃದ್ಧಿ ಸಂಸ್ಥೆಗಳ ಸಹಯೋಗದಲ್ಲಿ ಯುವ ಸಂವಾದ ಇಂಡಿಯಾ 2047 ಕಾರ್ಯಕ್ರಮ ನಡೆಸಿಕೊಡಲು ಜಿಲ್ಲೆಯ ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾವುದೇ ರಾಜಕೀಯ ಪಕ್ಷವಲ್ಲದ, ಪಕ್ಷಪಾತವಿಲ್ಲದ ಮತ್ತು ಜಾತಿ ಭೇದಭಾವವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸಮುದಾಯ ಅಭಿವೃದ್ಧಿ ಸಂಸ್ಥೆಗಳ ಮೂಲಕ 3 ಕಾರ್ಯಕ್ರಮಗಳನ್ನು ನಡೆಸಲಾಗುವುದು.
ಪ್ರತಿ ಕಾರ್ಯಕ್ರಮಕ್ಕೆ 20 ಸಾವಿರ ರು. ಅನುದಾನವನ್ನು ನೀಡಲಾಗುವುದು. ಆಸಕ್ತ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ಜಿಲ್ಲಾ ನೆಹರು ಯುವ ಕೇಂದ್ರದಲ್ಲಿ ನಿಗದಿತ
ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಮಾ. 29 ಸಂಜೆ 5ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ಕೊಠಡಿ ಸಂಖ್ಯೆ 42ರ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿಗಳು, ಮೊ: 9901863789 ನ್ನು ಸಂಪರ್ಕಿಸಲು ತಿಳಿಸಿದ್ದಾರೆ.