ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದ ಸಮೀಪದ ತುಂಗಾಭದ್ರಾ ನದಿಗೆ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತನಾದ ಘಟನೆ ನಡೆದಿದೆ.
ತಿಪ್ಪೇಶ್ ದೊಡ್ಡನಿ (12) ಎಂಬಾತನೇ ಮೃತ
ಬಾಲಕ. ಹೊನ್ನಾಳಿ ಸಮೀಪದ ಅರಬಗಟ್ಟೆಯ ಇಂದಿರಾಗಾಂಧಿ ವಸತಿಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ತಂದೆಯ ಆನಾರೋಗ್ಯದ ಕಾರಣ ರಜೆ ಪಡೆದು ತನ್ನ ಗ್ರಾಮಕ್ಕೆ ಬಂದಿದ್ದ. ಭಾನುವಾರ ಮಧ್ಯಾಹ್ನ ತನ್ನ ಗೆಳೆಯರೊಂದಿಗೆ ತುಂಗಾಭದ್ರಾ ನದಿಯಲ್ಲಿ ಈಜಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.
ಮೃತದೇಹವನ್ನು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಯ ನಂತರ ಶವನ್ನು ಬಾಲಕನ ಪೋಷಕರಿಗೆ ಹಸ್ತಾಂತರಿಸಿದ್ದು, ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



