ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ದಾವಣಗೆರೆಯ ಹಳೇಪೇಟೆಯ ಶ್ರೀ ವೀರಭದ್ರೇಶ್ವರ ಕೆಂಡ ಹಾಯ್ದರು. ಪ್ರತಿ ವರ್ಷದಂತೆ ಮಲ್ಲಿಕಾರ್ಜುನ್ ಹಳೇಪೇಟೆಯ ಶ್ರೀ ವೀರಭದ್ರೇಶ್ವರ ಅಗ್ನಿಕುಂಡ ಹಾಯುವ ಮೂಲಕ ಭಕ್ತಿ ಸಮರ್ಪಿಸಿದರು.
ಮಗಳು ವರ್ಷಾ, ಮಗ ಶಿವು ಜೊತೆಗೆ ಈ ಬಾರಿಯೂ ಕೆಂಡ ಹಾಯ್ದರು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವಿಗೆ ಪ್ರಾರ್ಥಿ ಸಿದರು. ಅವರಿಗೆ ಡಾ. ಪ್ರಭಾ ಮಲ್ಲಿಕಾರ್ಜುನ್, ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾರ್ಯಗಳಿಗೆ ಜನರು ಬೆಂಬಲಿಸುವರು. ಯಾರೇ ಸ್ಪರ್ಧಿಸಿದರೂ ಕಾಂಗ್ರೆಸ್ ದಾವಣಗೆರೆ ಉತ್ತರ ಮತ್ತು ದಕ್ಷಿಣದಲ್ಲಿ ಗೆಲ್ಲಲಿದೆ ಎಂದರು.



