Connect with us

Dvgsuddi Kannada | online news portal | Kannada news online

ದಾವಣಗೆರೆ; ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 25.85 ಲೀಟರ್ ಮದ್ಯ ವಶ

ದಾವಣಗೆರೆ

ದಾವಣಗೆರೆ; ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 25.85 ಲೀಟರ್ ಮದ್ಯ ವಶ

ದಾವಣಗೆರೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಚೆಕ್‌ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ಏಪ್ರಿಲ್ 30 ರಂದು ರೂ.11,718 ಮೌಲ್ಯದ 25.85 ಲೀ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ವಿವಿಧ ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಇದುವರೆಗೆ ರೂ.94,74,057 ನಗದು,
ರೂ.2,43,77,768.99 ಮೌಲ್ಯದ 23443.86 ಲೀ ಮದ್ಯ, 3.853 ಕೆ.ಜಿ
ಮಾದಕ ವಸ್ತು ಅಂದಾಜು ಮೌಲ್ಯ ರೂ.71,610, ರೂ.84,98,048 ಮೌಲ್ಯದ ಕುಕ್ಕರ್ ಸೇರಿದಂತೆ ಇತರೆ ವಸ್ತುಗಳು ಒಟ್ಟು ರೂ.4.24 ಕೋಟಿಯಷ್ಟು ನಗದು ಮತ್ತು ಇತರೆ ವಸ್ತುಗಳನ್ನು ನೀತಿ ಸಂಹಿತೆ
ಆರಂಭವಾದಾಗಿನಿಂದ ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾಗಿದೆ. ಏ.30 ರಂದು 25.85 ಲೀ ಮದ್ಯವನ್ನು ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ ಮಾಡಿ ವಶಪಡಿಸಿಕೊಳ್ಳಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top