ದಾವಣಗೆರೆ: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಪಟ್ಟಕ್ಕಾಗಿ ಸಿದ್ದಮರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕು ಎಂದು ಪ್ರಾರ್ಥಿಸಿ ದಾವಣಗೆರೆಯಲ್ಲಿ ಕುರುಬ ಸಮಾಜದ ಪ್ರಮುಖರು ನಗರದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಎಲ್ಲಾ ಸಮಾಜಕ್ಕೆ ಬೇಕಾಗುವ ವ್ಯಕ್ತಿ ಸಿದ್ದರಾಮಯ್ಯ. ರಾಜ್ಯದಲ್ಲಿ ಎಲ್ಲಾ ಸಮಾಜದವರನ್ನು ತನ್ನ ಜೊತೆಗೆ ಕೊಂಡೊಯ್ದು ಸಮ ಸಮಾಜವನ್ನು ನಿರ್ಮಾಣ ಮಾಡಿದ ವ್ಯಕ್ತಿತ್ವ ಅವರದು. 13 ಬಾರಿ ಬಜೆಟ್ ಮಂಡನೆ ಮಾಡಿರುವ ಹೆಗ್ಗಳಿಕೆಯನ್ನು ಹೊಂದಿದ್ದಾರೆ.ಈ ನಿಟ್ಟಿನಲ್ಲಿ ಕಾಂಗ್ರೆಸ್‌ನ ವರಿಷ್ಠರು ಬೇರೆ ಯಾವುದೇ ಒಂದು ಜಾತಿಗೆ ಸೀಮಿತ ಆಗುವ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಬಾರದು. ಬದಲಾಗಿ ಎಲ್ಲಾ ಸಮಾಜದ ವ್ಯಕ್ತಿ ಆಗಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕಾಗಿದೆ ಎಂದು ಕುರುಬ ಸಮಾಜದ ಅಧ್ಯಕ್ಷ ವೀರಣ್ಣ ಹೇಳಿದರು. ಈ ವೇಳೆ ಸಮಾಜದ ಮುಖಂಡರು ಇದ್ದರು.



