Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿಗೆ ಅರ್ಜಿ ಆಹ್ವಾನ  

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿಗೆ ಅರ್ಜಿ ಆಹ್ವಾನ  

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅ. 31 ರೊಳಗೆ ಆನ್‍ಲೈನ್ www.ssp.postmatric.karnataka.gov.in/2122 ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಇಲಾಖಾ ವೆಬ್‍ಸೈಟ್‍ನಲ್ಲಿ www.bcwd.karnataka.gov.in/ ಮಾಹಿತಿ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅಥವಾ 8050770004 ಹಾಗೂ ಇಮೇಲ್ ವಿಳಾಸ:bcwd.scholarship@karnataka.gov.in ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ:080-35254757, ಇಮೇಲ್ ವಿಳಾಸ: postmatrichelp@karnataka.gov.in ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top