Connect with us

Dvgsuddi Kannada | online news portal | Kannada news online

ದಾವಣಗೆರೆ: ದಿ ಕೇರಳ ಸ್ಟೋರಿ ಸಿನಿಮಾ ಉಚಿತ ವೀಕ್ಷಣೆಗೆ ಜೂನ್ 3ವರೆಗೆ ಅವಕಾಶ

ದಾವಣಗೆರೆ

ದಾವಣಗೆರೆ: ದಿ ಕೇರಳ ಸ್ಟೋರಿ ಸಿನಿಮಾ ಉಚಿತ ವೀಕ್ಷಣೆಗೆ ಜೂನ್ 3ವರೆಗೆ ಅವಕಾಶ

ದಾವಣಗೆರೆ: ದಾವಣಗೆರೆಯ ಪ್ರೇರಣಾ ಯುವ ಸಂಸ್ಥೆಯು “ದಿ ಕೇರಳ ಸ್ಟೋರಿ”ಸಿನಿಮಾ ವನ್ನು ಸಾರ್ವಜನಿಕರಿಗಾಗಿ ಉಚಿತವಾಗಿ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ. ಕಳೆದ ಒಂದು ವಾರದಿಂದಲೂ ನಗರದ ತ್ರಿಶೂಲ್ ಚಿತ್ರಮಂದಿರದಲ್ಲಿ ಉಚಿತ ವೀಕ್ಷಣೆ ವ್ಯವಸ್ಥೆ ಏರ್ಪಡಿಸಿತ್ತು. ಇದಕ್ಕೆ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು, ಪೋಷಕರು ಖುಷಿ ವ್ಯಕ್ತಪಡಿಸಿದ್ದರು.

ಮತ್ತೆ ಜೂನ್ 3 ರವೆರೆಗೆ ಪ್ರತಿದಿನ ಬೆಳಗ್ಗೆ 10.30 ಹಾಗೂ ಮಧ್ಯಾಹ್ನ 2 ಗಂಟೆಗೆ ತ್ರಿಶೂಲ್ ಚಿತ್ರಮಂದಿರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ವೀಕ್ಷಿಸ ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದು ಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಿನಿಮಾ ವೀಕ್ಷಿಸಬೇಕೆಂದು ದಾವಣಗೆರೆಯ ಪ್ರೇರಣ ಯುವ ಸಂಸ್ಥೆಯ ಅಧ್ಯಕ್ಷ ಎಸ್. ಟಿ. ವೀರೇಶ್ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98805- 44153, 98444- 22677 ಇಲ್ಲಿ ಸಂಪರ್ಕಿಸಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top