Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಈ ದಿನಾಂಕದಂದು ಸಭೆ

Davanagere DC office

ದಾವಣಗೆರೆ

ದಾವಣಗೆರೆ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಈ ದಿನಾಂಕದಂದು ಸಭೆ

ದಾವಣಗೆರೆ; ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ಆರು ತಾಲೂಕುಗಳಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

ಜೂನ್ 22 ರಂದು 10 ಗಂಟೆಗೆ ಚನ್ನಗಿರಿ ತಾ; ಗ್ರಾಮ ಪಂಚಾಯಿತಿ ಗ್ರಾ.ಪಂ ಸಂಖ್ಯೆ 61, ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾ; ಗ್ರಾಮ ಪಂಚಾಯಿತಿ ಗ್ರಾ.ಪಂ. ಸಂಖ್ಯೆ 17, ಸಂಜೆ 4 ಗಂಟೆಗೆ ಹರಿಹರ ಗ್ರಾಮ ಗ್ರಾ.ಪಂ ಸಂಖ್ಯೆ 23 ಗೆ ಮೀಸಲು ನಿಗದಿ ಮಾಡಲಾಗುತ್ತದೆ. ಜೂನ್ 23 ರಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆ ತಾ; ಗ್ರಾಮ ಪಂಚಾಯತಿ ಗ್ರಾ.ಪಂ ಸಂಖ್ಯೆ 42, ಮಧ್ಯಾಹ್ನ 2 ಗಂಟೆಗೆ ಹೊನ್ನಾಳಿ ತಾ; ಗ್ರಾಮ ಪಂಚಾಯಿತಿ ಗ್ರಾ.ಪಂ ಸಂಖ್ಯೆ 29, ಹಾಗೂ ಸಂಜೆ 4 ಗಂಟೆಗೆ ಜಗಳೂರು ತಾ; ಗ್ರಾಮ ಪಂಚಾಯತಿ ಗ್ರಾ.ಪಂ ಸಂಖ್ಯೆ 22 ಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ಪ್ರಕ್ರಿಯೆ ಕೈಗೊಂಡಿರುವುದರಿಂದ ಸಂಬಂಧಿಸಿದ ಗ್ರಾಮ ಪಂಚಾಯಿತಿ ಸದಸ್ಯರು ನಿಗಧಿತ ದಿನಾಂಕದಂದು ಸಮಯಕ್ಕೆ ಹಾಜರಾಗಲು ಅವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top