ದಾವಣಗೆರೆ: ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಾರ್ವಜನಿಕರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲಾ ಲೀಡ್ ಬ್ಯಾಂಕ್ ಕಚೇರಿ ಮತ್ತು ಜಿಲ್ಲಾ ಮಟ್ಟದ ಬ್ಯಾಂಕ್ ಗಳ ಸಮಿತಿಯ ಸಹಯೋಗದೊಂದಿಗೆ “ಗ್ರಾಹಕ ಸಂಪರ್ಕ ಕಾರ್ಯಕ್ರಮ” ವನ್ನು ಇಂದು(ಜೂ.23) ಬೆಳಿಗ್ಗೆ 11.00 ಕ್ಕೆ ದಾವಣಗೆರೆ ರೋಟರಿ ಬಾಲ ಭವನದಲ್ಲಿ ಆಯೋಜಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಲೀಡ್ ಬ್ಯಾಂಕಿನ ವಿಭಾಗೀಯ ಪ್ರಬಂಧಕ ಜಿ.ಸಿ.ಪ್ರಕಾಶ್ ತಿಳಿಸಿದ್ದಾರೆ.
ಜಿಲ್ಲಾ ಲೀಡ್ ಬ್ಯಾಂಕ್ ಹಾಗೂ ಜಿಲ್ಲಾ ಬ್ಯಾಂಕರುಗಳ ಸಮನ್ವಯ ಸಮಿತಿಯ ವತಿಯಿಂದ ನಡೆಯಲಿರುವ ಈ ಗ್ರಾಹಕ ಸಂಪರ್ಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಪ್ರಮುಖ ಬ್ಯಾಂಕುಗಳು ಪಾಲ್ಗೊಂಡು ಗ್ರಾಹಕರಿಗೆ ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ಅಟಲ್ ಪಿಂಚಣಿ ಯೋಜನೆ, ಪಿಮ್‌ಎಸ್‌ಬಿವೈ, ಪಿಮ್‌ಜೆಜೆಬಿವೈ, ಮುದ್ರಾ, ಪಿಮ್‌ಸ್ವನಿಧಿ ಮುಂತಾದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ.
ಗ್ರಾಹಕ ಸಂಪರ್ಕ ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆಯ ಸಂಸದ ಶ್ರೀ ಜಿ.ಎಂ.ಸಿದ್ದೇಶ್ವರ ಅವರು ನೆರವೇರಿಸಲಿದ್ದಾರೆ, ಸಮಾರಂಭದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕಿನ ದಾವಣಗೆರೆ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ವೈ.ವಿ.ಎನ್.ಶಿವ ಪ್ರಸಾದ್ ವಹಿಸುವರು ಹಾಗೂ ಮುಖ್ಯ ಅತಿಥಿಗಳಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದಾವಣಗೆರೆ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ಅನಿಲ್ ಬಿಹಾರಿ, ಕರ್ನಾಟಕ ಗ್ರಾಮೀಣ ಬ್ಯಾಂಕಿನ ದಾವಣಗೆರೆ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ಪ್ರವೀಣ್ ಪ್ರಭಾಕರ್ ಹಾಗೂ ಇತರ ಪ್ರಮುಖ ಬ್ಯಾಂಕುಗಳ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಹಾಗೂ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವಿಭಾಗೀಯ ಪ್ರಬಂಧಕ ಜಿ.ಸಿ.ಪ್ರಕಾಶ್ ಉಪಸ್ಥಿತರಿರುವರು. ಸಾರ್ವಜನಿಕರು ಮತ್ತು ಬ್ಯಾಂಕ್ ಗ್ರಾಹಕರು ಕಾರ್ಯಕ್ರಮದ ಪ್ರಯೋಜನವನ್ನು ಗರಿಷ್ಠ ಪ್ರಮಾಣದಲ್ಲಿ ಪಡೆಯಬೇಕಾಗಿ ಲೀಡ್ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



